ಪರಸ್ಪರ ವೈರುಧ್ಯಗಳನ್ನೇ ಅದೃಶ್ಯ ತಂತುಗಳಿಂದ ಸಂಯೋಜಿಸುತ್ತ ಸಾಗುವ ಈ ಕಾದಂಬರಿಯೊಂದು ವಿಚಿತ್ರ ಮತ್ತು ಅಸಾಧಾರಣ ಕೃತಿ. ಜೀವನದ ವಿರಾಟ್ ಅರ್ಥ ಹೀನತೆಯ ಪರಿಧಿಯೊಳಗೆ ಅದರ ಅರ್ಥಪೂರ್ಣತೆಯನ್ನು ಅನ್ವೇಷಿಸುತ್ತದೆ. ಅಸಂಗತ ಘಟನಾವಳಿಗಳ ಸರಣಿಯನ್ನೇ ಸುಸಂಗತ ಕಥೆಯನ್ನಾಗಿ ನೇಯುತ್ತದೆ. ಚರಿತ್ರೆಯ ಅಪಹಾಸ್ಯವನ್ನು ತಿಳಿಹಾಸ್ಯ ಮತ್ತು ವಿನೋದಗಳಿಂದ ಪ್ರತಿರೋಧಿಸುತ್ತದೆ. ಶತಮಾನದ ಕಥೆಯನ್ನು ಇಪ್ಪತ್ತನಾಲ್ಕು ಗಂಟೆಗಳಲ್ಲಿ ಪ್ರತಿಮಿಸುತ್ತದೆ. ಜೀವನವನ್ನು ಎದುರಿಸಲು ಆಶಾವಾದ, ನಿರಾಶವಾದ ಇವುಗಳೆಲ್ಲವನ್ನೂ ಮೀರಿದ ಗಂಭೀರ ಎದೆಗಾರಿಕೆಯನ್ನು ಇದು ನಮಗೆ ತೋರಿಸಿ ಕೊಡುತ್ತದೆ.