Read Anywhere and on Any Device!

Subscribe to Read | $0.00

Join today and start reading your favorite books for Free!

Read Anywhere and on Any Device!

  • Download on iOS
  • Download on Android
  • Download on iOS

ಮಾಕೋನ ಏಕಾಂತ | Maakona Ekantha

Kavya Kadame
4.17/5 (6 ratings)
ಕವಯತ್ರಿ ಕಾವ್ಯಾ ಕಡಮೆ ಅವರ ’ ಮಾಕೋನ ಏಕಾಂತ’ ಕೃತಿಯು ಕತಾಸಂಕಲನವಾಗಿದೆ. ಈ ಸಂಕಲನದಲ್ಲಿ ಒಟ್ಟು ಎಂಟು ಕತೆಗಳಿವೆ. ಕೃತಿಗೆ ಮುನ್ನುಡಿ ಬರೆದಿರುವ ಟಿ.ಪಿ ಅಶೋಕ್ ಅವರು, ‘ಭಿನ್ನ ಸಾಂಸ್ಕೃತಿಕ ಆವರಣಗಳಲ್ಲಿ ಅರಳಿರುವ ಈ ಕತೆಗಳು ಅನುಭವದ ತಾಜಾತನದಿಂದ, ಲವಲವಿಕೆಯ ನಿರೂಪಣೆಯಿಂದ, ಪ್ರಬುದ್ಧ ನಿರ್ವಹಣೆಯಿಂದ ಮನಮುಟ್ಟುತ್ತವೆ. ತೀರ್ಪು ಕೊಡುವ ಆತುರಕ್ಕೆ ಬೀಳದೆ ಮನುಷ್ಯ ಸ್ವಭಾವ ಮತ್ತು ಸಂಬಂಧಗಳ ಹಲವು ಆಯಾಮಗಳನ್ನು ಮುಕ್ತವಾಗಿ, ಸೂಕ್ಷ್ಮವಾಗಿ ಪರಿಶೀಲಿಸಿಕೊಳ್ಳುವ ವ್ಯವಧಾನ, ಉದಾರತೆ ಇಲ್ಲಿ ಕಾಣುತ್ತವೆ. ಜೀವನ ವೈಶಾಲ್ಯ-ವೈವಿಧ್ಯಗಳ ಬಗ್ಗೆ ಲೇಖಕಿ ಉಳಿಸಿಕೊಂಡಿರುವ ಬೆರಗು ಈ ಕತೆಗಳ ಸ್ಥಾಯೀ ಭಾವವಾಗಿದೆ.

ಸಿದ್ಧ ಜಾಡನ್ನು ಬಿಟ್ಟು ಹೊಸ ಹೊಸ ಲೋಕಗಳನ್ನು ಅನ್ವೇಷಿಸುವ ದಿಟ್ಟತನ, ಕಾವ್ಯಕ್ಕೆ ಸಮೀಪವೆನ್ನಿಸುವಂತಹ ಭಾಷಾ ಬಳಕೆ, ಕತೆಗಿಂತ ಕಥನಕ್ಕೆ ನೀಡಿರುವ ಪ್ರಾಮುಖ್ಯತೆಗಳಿಂದಾಗಿ ಈ ಬರಹಗಳು ವಿಶಿಷ್ಟವಾಗಿವೆ. ಕನ್ನಡೇತರ ಪರಿಸರಗಳಲ್ಲಿ ಸೃಷ್ಟಿಯಾಗುವ ಅನುಭವಗಳನ್ನು ಕನ್ನಡ ಭಾಷೆಯಲ್ಲಿ ಗ್ರಹಿಸಿ-ಅಭಿವ್ಯಕ್ತಿಸುವ ಮೂಲಕ ಕನ್ನಡ ಓದುಗರ ಭಾವಲೋಕಗಳನ್ನು ಹಿಗ್ಗಿಸುವಲ್ಲಿ ಲೇಖಕಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಈ ಕತೆಗಳನ್ನು ಓದುತ್ತಿದ್ದಂತೆ ಹೊಸದೇನನ್ನೋ ಅನುಸಂಧಾನ ಮಾಡುತ್ತಿರುವ ಅನುಭವವಾಗುತ್ತದೆ’ ಎಂದಿದ್ದಾರೆ.
Format:
Paperback
Pages:
132 pages
Publication:
2021
Publisher:
Chanda Pustaka
Edition:
First Edition
Language:
kan
ISBN10:
ISBN13:
kindle Asin:
B0DM4K7DDJ